(ನ್ಯೂಸ್ ಕಡಬ) newskadaba.com ಚನ್ನಪಟ್ಟಣ, ಅ.25. ರಾಜಕೀಯ ಕಣ ರಂಗೇರುತ್ತಿದ್ದು ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕಿಳಿದಿದ್ದು, ಇದು ಅವರ ಮೂರನೇ ಬಾರಿಯ ಅದೃಷ್ಟಪರೀಕ್ಷೆಯಾಗಿದೆ.
ನಾಮಪತ್ರ ಸಲ್ಲಿಕೆಗೆ ಮುನ್ನ ನಿಖಿಲ್ ಕುಮಾರಸ್ವಾಮಿ ಮತ್ತು ಕುಟುಂಬ ದೇವರ ಮೊರೆ ಹೋಗಿದ್ದಾರೆ. ಚನ್ನಪಟ್ಟಣದ ಕೆಂಗಲ್ ಆಂಜನೇಯ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರೋ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿಯೂ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.