ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com .26,ಕಲಬುರಗಿ: ರಾಜ್ಯದಲ್ಲಿರುವ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿರವರು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಹೇಳಿದರು.ಇದೇ ವೇಳೆ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿರುವ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 7 ಸಾವಿರ ಕೋಟಿ ರೂ ನೀಡಲಾಗಿದೆ. ಅದರಲ್ಲೂ ರೂ.300ಕೋಟಿಯನ್ನು ಚಿತ್ತಾಪುರ ಕ್ಷೇತ್ರಕ್ಕೆ ನೀಡಲಾಗಿದೆ. ಕಲಬುರಗಿ ಜಿಲ್ಲೆಯ 30 ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ವಾಡಿಯ ಸರ್ವಾಂಗೀಣ ಅಭಿವೃದ್ಧಿಗೆ ಅಂದಾಜು 25 ಕೋಟಿ ರೂ.ಗಳ ಯೋಜನೆಯನ್ನೂ ಸಿದ್ಧಪಡಿಸಲಾಗಿದೆ. ಚಿತ್ತಾಪುರ ಪಟ್ಟಣದಲ್ಲಿ ಮೃಗಾಲಯ ಹಾಗೂ ವಿಜ್ಞಾನ ಕೇಂದ್ರ ತೆರೆಯುವ ಯೋಜನೆಯೂ ಇದೆ ಎಂದು ಹೇಳಿದರು.

error: Content is protected !!
Scroll to Top