(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದರು ಎಂದು ವರದಿಯಾಗಿದೆ.
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ, ಹೆಚ್ಡಿ ದೇವೇಗೌಡ ಮತ್ತು ಹೆಚ್ಡಿ ಕುಮಾರಸ್ವಾಮಿ ಅವರ ಜೊತೆಗೆ ಸ್ವಲ್ಪ ಸಮಯ ಮಾತನಾಡಿ ತೆರಳಿದ್ದಾರೆ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ.