ಮನೆ, ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಯೊಳಗೆ ಪರಿಹಾರ ಒದಗಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದರು. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮಳೆ ಹಾನಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

Also Read  ಪತ್ರಕರ್ತ ಸೇರಿ ರಾಜ್ಯದಲ್ಲಿ 15 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ

error: Content is protected !!
Scroll to Top