ದಕ್ಷಿಣ ಕೊರಿಯಾದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಧ್ಯಯನ ಪ್ರವಾಸ

(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ರ ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25 ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು. ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.

Also Read  12 ವರ್ಷ ಮೇಲ್ಪಟ್ಟ ಹಸುಗಳನ್ನು ಕೊಲ್ಲಲು ಕಾನೂನಿನಲ್ಲಿ ಅವಕಾಶವಿದೆ ➤ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

error: Content is protected !!
Scroll to Top