(ನ್ಯೂಸ್ ಕಡಬ) newskadaba.com ಅ.29. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಸಂಸ್ಥೆಯಲ್ಲಿ ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್, ಟ್ಯಾಲಿ ಪ್ರೈಮ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಉದ್ಯೋಗಾಧಾರಿತ ಕೋರ್ಸ್ ಗಳಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಅಲ್ಪಾವಧಿ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕದ್ರಿ ಹಿಲ್ಸ್ ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ ನ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿಗೊಳಿಸಿ ತರಬೇತಿಗೆ ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಮಂಗಳೂರಿನ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.