ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ.


ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಯಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

 

Scroll to Top