(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ತಿಳಿಸಿದರು.
ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.