ಕೋಳಿಸಾಕಾಣಿಕೆ ಮತ್ತು ಫೋಟೋಗ್ರಫಿಯ ಉಚಿತ ತರಬೇತಿ: ಅರ್ಜಿ ಅಹ್ವಾನ

(ನ್ಯೂಸ್ ಕಡಬ)newskadaba.com,. 30 ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಹಾಗೂ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್‌ ಮೊದಲ ವಾರದಲ್ಲಿ ಆರಂಭವಾಗಲಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Also Read  ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ

error: Content is protected !!
Scroll to Top