ಬಾಲಿವುಡ್ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ ಸಂದೇಶ

(ನ್ಯೂಸ್ ಕಡಬ)newskadaba.com ಮುಂಬೈ, . 30. ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ.

ಮೇಲಿಂದ ಮೇಲೆ ನಟ ಸಲ್ಮಾನ್ ಖಾನ್ ಜೀವ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ಜೀವ ಬೆದರಿಕೆ ಸಂದೇಶದ ಜೊತೆಗೆ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ. ಜೊತೆಗೆ ತಾವು ಕೇಳಿದಷ್ಟು ಹಣ ನೀಡದೆ ಇದ್ದರೆ ಹತ್ಯೆ ಮಾಡುವುದಾಗಿ ಸಂದೇಶ ರವಾನಿಸಿದ್ದಾರೆ. ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

Also Read  ಹಳೆಯಂಗಡಿ: ಸಿಡಿಲು ಬಡಿದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕ ಮೃತ್ಯು

 

 

error: Content is protected !!
Scroll to Top