ಬೈತಡ್ಕ: ಟ್ಯಾಂಕರ್ ಪಲ್ಟಿ- ಡೀಸೆಲ್ ಸೋರಿಕೆ

(ನ್ಯೂಸ್ ಕಡಬ) newskadaba.com ಅ.30. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಒಂದು ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಬುಧವಾರದಂದು ನಡೆದಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸೆಲ್ ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆಯಿಂದ ಚಾಲಕನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Scroll to Top