ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com,. 31 ಬೆಂಗಳೂರು: ಸಿ.ಎಂ ಸಿದ್ದರಾಮಯ್ಯರವರು ಅಕ್ರಮ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಅಧಿಕೃತವಲ್ಲದ ಕಟ್ಟಡಗಳ ನಿರ್ಮಾಣ ನಡೆಯುತ್ತಿದೆ. ಕಂದಾಯ ಬಡಾವಣೆಗಳಲ್ಲಿ ಹಾಗೂ ಬಿ ಖಾತಾ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯುತ್ತಿಲ್ಲ. ಸೆಟ್‌ ಬ್ಯಾಕ್‌ ಬಿಡದೆ ಅಕ್ರಮವಾಗಿ 6 ರಿಂದ 8 ಮಹಡಿ ಕಟ್ಟುತ್ತಿದ್ದಾರೆ. ಇಂತಹ ಅಕ್ರಮ ನಿರ್ಮಾಣದಿಂದ ಇತ್ತೀಚೆಗೆ ಕಟ್ಟಡ ನೆಲಸಮ ಆಗಿ 8 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಅಕ್ರಮ ನಿರ್ಮಾಣಗಳನ್ನು ನಿಯಂತ್ರಿಸಲು ಕಾನೂನು ಭದ್ರ ಮಾಡುತ್ತಿದ್ದೇವೆ ಎಂದು ಹೇಳಿದರು.

Also Read  ಪಕ್ಕದ ಮನೆಯವನೊಂದಿಗೆ ಅನೈತಿಕ ಸಂಬಂಧ        ➤  ನಡುರಸ್ತೆಯಲ್ಲೇ ಶಾಲಾ ಶಿಕ್ಷಕಿಯನ್ನು ಕೊಂದ ಪತಿ

error: Content is protected !!
Scroll to Top