ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, . 31.  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ದರ್ಶನ್‌ ಕುಟುಂಬದವರು ಹಾಗೂ ಮಿತ್ರರು ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ವೈದ್ಯರನ್ನು ಕನ್‌ಸಲ್ಟ್‌ ಮಾಡಿದ್ದಾರೆ. ಅಭಿಮಾನಿಗಳ ಕಾಟ ತಪ್ಪಿಸಲು ಆಸ್ಪತ್ರೆಗೆ ಬಿಗಿ ಭದ್ರತೆಯನ್ನು ಒದಗಿಸಲಾಗುತ್ತಿದೆ. ಚಿಕಿತ್ಸೆ ಪಡೆದ 6 ವಾರಗಳ ಬಳಿಕ ಅವರು ಮತ್ತೆ ವಿಚಾರಣಾ ಕೋರ್ಟ್‌ಗೆ ಸರೆಂಡರ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಅವರು ಇಂದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪ್ರಕ್ರಿಯೆ ಆರಂಭಿಸಲಿದ್ದಾರೆ.

Also Read  ಹಿರಿಯ ನಾಗರಿಕರಿಗೆ ಒಂದು ದಿನದ ಉಚಿತ ಕಾರ್ಯಗಾರ

 

 

error: Content is protected !!
Scroll to Top