ಕಡಬ: ಮರಬಿದ್ದು ದ್ವಿಚಕ್ರ ವಾಹನ ಸವಾರ ಮೃತ್ಯು – ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 02. ಹಾಲುಮಡ್ಡಿ ಮರವೊಂದು ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿರುವ ಸ್ಥಳೀಯರು ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ದೂಪದ ಮರ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಪಾಯಕಾರಿ ಮರಗಳನ್ನು ಸಂಪೂರ್ಣ ತೆರವುಗೊಳಿಸಬೇಕೆಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

Scroll to Top