ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ರಾಜ್ಯ ರಾಜಧಾನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 23ರ ತನಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್‌ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜಕರ ಹುದ್ದೆಗೆಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಕೌಂಟೆಟ್‌ ನಲ್ಲಿ ತಜ್ಞರ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿ ಹಣಕಾಸು ಸಾಕ್ಷರತೆ ಮತ್ತು ಅರ್ಥಶಾಸ್ತ್ರ, ಬ್ಯಾಂಕಿಂಗ್ ಇತರೆ ವಿಭಾಗಗಳಲ್ಲಿ ಪದವೀಧರರಾಗಿರಬೇಕು. ಸ್ನಾತಕೋತ್ತರ ಪದವಿ ಹೊಂದಿದವರಿಗೆ ಅದ್ಯತೆ ನೀಡಲಾಗುತ್ತದೆ.

Also Read  ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ

ಸರ್ಕಾರಿ/ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ/ ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂಎಸ್ ಆಫೀಸ್ ಹಾಗೂ ಪಿಪಿಟಿಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜಕ ಹುದ್ದೆಗೆ ಕಂಪ್ಯೂಟರ್/ ಐಟಿ ಇತ್ಯಾದಿಗಳಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪದವಿ ಹೊಂದಿರಬೇಕು.

ಸರ್ಕಾರಿ/ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.

ಕಂಪ್ಯೂಟರ್ ಬಳಕೆಯಲ್ಲಿ ಕನ್ನಡ/ ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂಎಸ್ ಆಫೀಸ್ ಹಾಗೂ ಪಿಪಿಟಿಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ. ಹೆಚ್. ಮರಿಗೌಡ ರಸ್ತೆ, ಬೆಂಗಳೂರು-560029 ಇಲ್ಲಿಗೆ ತಮ್ಮ ರೆಸ್ಯೂಮ್‌ ಅನ್ನು ಎಲ್ಲಾ ದಾಖಲೆಗಳೊಂದಿಗೆ ನವೆಂಬರ್ 23ರೊಳಗೆ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26578688 ಸಂಖ್ಯೆಗೆ ಕರೆ ಮಾಡಬಹುದು.

error: Content is protected !!
Scroll to Top