(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ- ಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆ- ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್
ಒಟ್ಟು ಹುದ್ದೆ- 76
ವಿದ್ಯಾರ್ಹತೆ- ಬಿ.ಟೆಕ್
ವೇತನ ಮಾಸಿಕ- ₹ 33,450- 62,600
ಉದ್ಯೋಗದ ಸ್ಥಳ- ಕರ್ನಾಟಕ
ಹುದ್ದೆಯ ಮಾಹಿತಿ:
ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ (RPC)- 70
ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ (HK)- 6
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ SSLC, ಡಿಪ್ಲೊಮಾ, ಆಟೋಮೊಬೈಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಇಲ್ಲಿ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಹಾಕಲು https://www.kpsc.kar.nic.in/ ಇದನ್ನು ಕ್ಲಿಕ್ ಮಾಡಿ.