ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನ ಹತ್ಯೆ



(ನ್ಯೂಸ್ ಕಡಬ) newskadaba.com ಶ್ರೀನಗರ, ನ. 07. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.







ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ 47 ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಬುಧವಾರ ಈ ಕಾರ್ಯಾಚರಣೆ ಮುಂದುವರೆದಿದೆ.






 

error: Content is protected !!
Scroll to Top