(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.22. ಸ್ನಾನಕ್ಕೆಂದು ನದಿಗಿಳಿದ ಯುವಕನೋರ್ವ ನೀರುಪಾಲಾದ ಘಟನೆ ಧರ್ಮಸ್ಥಳ ಸಮೀಪ ಕುದ್ರಾಯ ಎಂಬಲ್ಲಿ ಗುರುವಾರದಂದು ನಡೆದಿದೆ.
ಮೃತ ಯುವಕನನ್ನು ಧರ್ಮಸ್ಥಳ ನಿವಾಸಿ ಗಿರೀಶ್ (30) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ನದಿಗೆ ತೆರಳಿದ್ದು, ನೀರಿಗೆ ಇಳಿಯುವ ಮುಂಚೆ ಮದ್ಯ ಸೇವಿಸಿದ್ದನೆನ್ನಲಾಗಿದೆ. ಇದರಿಂದಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿದ ಧರ್ಮಸ್ಥಳ ಪೋಲೀಸರು ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.