(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.23. ಪ್ರಧಾನಿ ಮೋದಿಯವರ ಭಾವಚಿತ್ರವನ್ನು ವಿರೂಪಗೊಳಿಸಿ ವಾಟ್ಸಪ್ ಗ್ರೂಪ್ ನಲ್ಲಿ ಹಂಚಿದ ಹಿನ್ನೆಲೆಯಲ್ಲಿ ಗ್ರೂಪ್ ಅಡ್ಮಿನ್ ಹಾಗೂ ಸದಸ್ಯನೋರ್ವನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಫ್ರೆಂಡ್ಸ್ ಪಡುಬೆಟ್ಟು ಎಂಬ ಗ್ರೂಪ್ ನಲ್ಲಿ ಮಾರ್ಚ್ 20 ರಂದು ಅಪರಾಹ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮುಖವನ್ನು ಹಂದಿಯ ಮುಖದಂತೆ ಚಿತ್ರಿಸಿ ಹಂಚಿಕೊಂಡಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರೂಪ್ ಅಡ್ಮಿನ್ ಹಾಗೂ ಓರ್ವ ಸದಸ್ಯನ ವಿರುದ್ಧ ‘ನಮ್ಮ ಪ್ರಧಾನಿಯ ಘನತೆಗೆ ಧಕ್ಕೆ ಉಂಟಾಗಿದ್ದು, ಈ ಬಗ್ಗೆ ಇಬ್ಬರನ್ನೂ ಕರೆಸಿ ವಿಚಾರಣೆ ನಡೆಸಿ ನ್ಯಾಯ ಒದಗಿಸಬೇಕೆಂದು ನೆಲ್ಯಾಡಿಯ ಪ್ರಕಾಶ್ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.