ಇಂದಿನಿಂದ (ಮಾ.23 – ಎ.06) ರ ವರೆಗೆ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆ ► ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಸಕಲ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.23. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾರಿ ಮುಂಚಿತವಾಗಿಯೇ ಪರೀಕ್ಷೆಗಳು ನಡೆಯುತ್ತಿದ್ದು, ಅದರಂತೆ ಇಂದಿನಿಂದ ಎಪ್ರಿಲ್ 06 ಎ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ರಾಜ್ಯದಲ್ಲಿ ಒಟ್ಟು 8,54,424 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ 3,88,701 ವಿದ್ಯಾರ್ಥಿಗಳು ಹಾಗೂ 3,72,271 ವಿದ್ಯಾರ್ಥಿನಿಯರು ಸೇರಲಿದ್ದಾರೆ. ಇದರಲ್ಲಿ 70,253 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 23,199 ಖಾಸಗಿ ಅಭ್ಯರ್ಥಿಗಳೂ ಸೇರಿದ್ದಾರೆ. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಸಕಲ ಕ್ರಮಗಳನ್ನು ಕೈಗೊಂಡಿದ್ದು, ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

Also Read  ಕಡಬ ಪೇಟೆಯಲ್ಲಿ ಕೊರೋನಾ ಜಾಗೃತಿ ಜಾಥಾ

error: Content is protected !!
Scroll to Top