ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.

ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ ಬಾಲಕಿ ತಪ್ಪಿಸಿಕೊಂಡು ಹೋಗಿ ಮನೆಯವರಲ್ಲಿ ವಿಷಯ ತಿಳಿಸಿದ್ದಳು. ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ನಗರ ಠಾಣೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.

Also Read  ಧರ್ಮಗುರುಗಳು ಸೇರಿದಂತೆ ಕಡಬದ ನಾಲ್ವರಲ್ಲಿ ಇಂದು ಕೊರೋನಾ ಸೋಂಕು

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರು 14 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿದ್ದು, ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆ ಆರೋಪಿಗೆ 3 ವರ್ಷ ಜೈಲು ಮತ್ತು 21,400 ರೂ. ದಂಡ ವಿಧಿಸಲಾಗಿದೆ. ಇನ್ನು ಆರೋಪಿಗೆ ವಿಧಿಸಲಾದ ದಂಡದ ಮೊತ್ತದಲ್ಲಿ 15 ಸಾವಿರ ರೂ. ಅನ್ನು ಬಾಲಕಿಗೆ ಪರಿಹಾರದ ರೂಪದಲ್ಲಿ ನೀಡಬೇಕೆಂದು ತೀರ್ಪು ನೀಡಲಾಗಿದೆ.

error: Content is protected !!
Scroll to Top