ಕುಂದಾಪುರ: ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

(ನ್ಯೂಸ್ ಕಡಬ) newskadaba.com ಕುಂದಾಪುರ, . 13.  ವಿನೋದ್ ಕ್ರಾಸ್ಟೋ ಅವರ ತಂದೆ ತಾಯಿ ಜನಸೇವೆಯಲ್ಲಿ ಗುರುತಿಸಿಕೊಂಡವರು. ಇವರು ಕೂಡಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದವರು. ಅವರ ಸೇವೆಯನ್ನು ಪಕ್ಷ ಗುರುತಿಸಿದ್ದು, ಕುಂದಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪಕ್ಷದ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಕೋಡಿ ಶಂಕರ ಪೂಜಾರಿ, ಬಿ. ಹೆರಿಯಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ ಮೊದಲಾದವರು ಉಪಸ್ಥಿತರಿದ್ದರು.

Also Read  ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ        

 

error: Content is protected !!
Scroll to Top