ಚುನಾವಣಾಧಿಕಾರಿಗೆ ಕಪಾಳಮೋಕ್ಷ : ಅಭ್ಯರ್ಥಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com . 14.  ರಾಜಸ್ಥಾನದ ಡಿಯೋಲಿ-ಉನಿಯಾರಾ ಅಸೆಂಬ್ಲಿಯ ಉಪಚುನಾವಣೆಯ ವೇಳೆ ಚುನಾವಣಾಧಿಕಾರಿಗೆ ಕಪಾಳಮೋಕ್ಷ ಮಾಡಿದ್ದ ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನರೇಶ್ ಮೀನಾ ಬಂಧನಕ್ಕೂ ಕೆಲವೇ ನಿಮಿಷಗಳ ಮೊದಲು ʻನಾನು ಪೊಲೀಸರಿಗೆ ಶರಣಾಗುವುದಿಲ್ಲʼ ಎಂದು ಮಾಧ್ಯಮಗಳ ಮುಂದೆ ಘೋಷಿಸಿದ್ದರು. ಬುಧವಾರ ಸಂರವತ ಮತಗಟ್ಟೆಗೆ ತೆರಳಿದ್ದ ಮೀನಾ ಅವರು, ಚುನಾವಣಾ ಕರ್ತವ್ಯದಲ್ಲಿದ್ದ ಎಸ್‌ಡಿಎಂ ಅಮಿತ್ ಚೌಧರಿ ಅವರಿಗೆ ಕಪಾಳಮೋಕ್ಷ ಮಾಡಿದ್ದರು. ಅವರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಗೆ ಕಪಾಳಮೋಕ್ಷ ಮಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿತ್ತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ಮಾಡದಂತೆ ತಡೆದಿದ್ದಾರೆ.

Also Read  ಮಕ್ಕಳನ್ನು ಕೊಂದು ದಂಪತಿಗಳಿಬ್ಬರು ಆತ್ಮಹತ್ಯೆ

 

 

error: Content is protected !!