ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ರೈಲು ಹಳಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com . 14.  ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆಯಾದ ಮೃತದೇಹ ಅವರದ್ದೇ ಎಂದು ತಡವಾಗಿ ಬೆಳಕಿಗೆ ಬಂದಿದೆ.

ಮೃತ ದುರ್ದೈವಿಯನ್ನು ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಎಂದು ಗುರುತಿಸಲಾಗಿದೆ. ಉಗ್ಗಪ್ಪ ಪೂಜಾರಿ ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್‌ಗೆ ಹೋಗಿ ತನ್ನ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದಿದ್ದರು. ಬಳಿಕ ತನ್ನ ಸೊಸೆಗೆ ಕರೆ ಮಾಡಿ ಏನು ವಿಷಯವನ್ನು ತಿಳಿಸಲು ಯತ್ನಿಸಿ ಕರೆಯನ್ನು ಕಟ್ ಮಾಡಿದ್ದಾರೆ. ಮತ್ತೆ ಸೊಸೆ ತಿರುಗಿ ಪೋನ್ ಮಾಡಿದಾಗ ಪೋನ್ ರಿಸೀವ್ ಮಾಡದೆ ನಾಪತ್ತೆಯಾಗಿದ್ದರು. ಉಗ್ಗಪ್ಪ ಅವರು ಮೊಬೈಲ್ ಕೂಡ ಮನೆಯಲ್ಲೇ ಬಿಟ್ಟು ಹೋಗಿದ್ದರು. ಎಲ್ಲ ಕಡೆ ಉಗ್ಗಪ್ಪ ಅವರನ್ನು ಹುಡುಕಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಪುತ್ರ ಅನಿಲ್ ಕುಮಾರ್ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದೇ ದಿನ ಉಳ್ಳಾಲ ರೈಲು ಹಳಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಈ ಬಗ್ಗೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ► ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

 

error: Content is protected !!
Scroll to Top