ಎರಡನೇ ಮಗುವಿನ ತಂದೆಯಾದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ..!

(ನ್ಯೂಸ್ ಕಡಬ) newskadaba.com ನ. 16. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.


ರೋಹಿತ್ ಶರ್ಮಾ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಈ ಮೊದಲೇ ವರದಿಯಾಗಿತ್ತು. ಇದೀಗ ಶುಕ್ರವಾರದಂದು ರಿತಿಕಾ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗುವಿದ್ದು, ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಈಗ ಗಂಡು ಮಗುವಿಗೆ ರೋಹಿತ್ ಶರ್ಮಾ ತಂದೆಯಾಗಿರುವುದು ಅವರ ಕುಟುಂಬಸ್ಥರಿಗೆ ಸಂತಸ ತಂದಿದೆ.

Also Read  ಕೊರೊನಾಗೆ ಸೆಡ್ಡು ಹೊಡೆಯುತ್ತಿದ್ದಾರೆ ಜನ➤ ದ.ಕ ಜಿಲ್ಲೆಯಲ್ಲಿ ಒಂದೇ ದಿನ 183 ಮಂದಿ ಚೇತರಿಸಿ ಆಸ್ಪತ್ರೆಯಿಂದ ಬಿಡುಗಡೆ

error: Content is protected !!