ಮೊಬೈಲ್ ನೋಡುತ್ತಿದ್ದ ಮಗನ ತಲೆಗೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Crime

(ನ್ಯೂಸ್ ಕಡಬ) newskadaba.com . 16.  ಓದದೇ ಮಗ ಮೊಬೈಲ್ ನೋಡುತ್ತಿದ್ದದ್ದನ್ನು ಕಂಡು ತಂದೆ ಕ್ರಿಕೆಟ್ ಬ್ಯಾಟ್‌ನಿಂದ ತಲೆಗೆ ಹಲ್ಲೆಗೈದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಗ ಮೃತಪಟ್ಟ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ತೇಜಸ್ (14) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಕಳೆದ 20 ದಿನಗಳಿಂದ ತೇಜಸ್‌ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗದೇ ಪುಂಡ ಹುಡುಗರ ಜೊತೆ ತಿರುಗಾಡುತ್ತಿದ್ದ ತೇಜಸ್‌ ರಾತ್ರಿ ಮನೆಗೆ ಬಂದು ಮೊಬೈಲ್‌ನಲ್ಲಿ ರೀಲ್ಸ್‌, ವೀಡಿಯೋ ಗೇಮ್‌ ಆಡುತ್ತಿದ್ದ. ಅಲ್ಲದೇ ಹೊಸ ಮೊಬೈಲ್‌ ಕೊಡಿಸುವಂತೆ ತಂದೆಯೊಂದಿಗೆ ಜಗಳವಾಡಿದ್ದ. ಕುಡಿದು ಮನೆಗೆ ಬಂದಿದ್ದ ತಂದೆ ರವಿಕುಮಾರ್ ಮಗ ಮೊಬೈಲ್ ನೋಡುತ್ತಿರುವುದನ್ನು ಕಂಡು ಕೋಪಗೊಂಡು ಕ್ರಿಕೆಟ್ ಬ್ಯಾಟ್‌ನಿಂದ ಆತನ ತಲೆಗೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ತೇಜಸ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ

 

Scroll to Top