ಮಂಗಳೂರು: ನ.19 ರಂದು ಯಕ್ಷಗಾನ ಅಕಾಡೆಮಿಯಿಂದ ವಿವಿಧ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com . 16. ಮಂಗಳೂರು: 2023 ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ನ.19 ರಂದು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿಯನ್ನು ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಸಂಜೆ 4.30ಕ್ಕೆ ಮಂಗಳೂರಿನ ಉರ್ವಸ್ಟೋರ್ ಬಳಿಯ ಅಂಬೇಡ್ಕರ್ ಭವನದಲ್ಲಿ ಸಮಾರಂಭ ನಡೆಯಲಿದೆ ಎಂದರು.

Scroll to Top