ಆಟೋ- ಕಾರು ಡಿಕ್ಕಿ: ನವಜೋಡಿ ಸೇರಿ 7 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com . 16.  ಮದುವೆ ಮುಗಿಸಿ ವರನ ಮನೆಗೆ ತೆರಳುತ್ತಿದ್ದ ವೇಳೆ ಕಾರು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.

ಇಂದು ಮುಂಜಾನೆ ಘಟನೆ ನಡೆದಿದ್ದು, ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ನಡೆದಿದೆ

 

Scroll to Top