ಡಿವೈಡರ್‌- ಕಾರು ಡಿಕ್ಕಿ – ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, . 18. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

Also Read  ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು

 

error: Content is protected !!