ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com  ನ. 19. ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಹೇಳಿದರು.

ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಚರ್ಚಿಸಿ ಕೆಲಸ ಆರಂಭಿಸುತ್ತೇವೆ ಎಂದು ಹೇಳಿದರು.ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಏರ್​ಪೋರ್ಟ್​ಗಿಂತ ವಿಭಿನ್ನವಾಗಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ. ಏರ್​ಪೋರ್ಟ್​ನಲ್ಲಿ ಸಿಗುವ ಎಲ್ಲಾ ಸವಲತ್ತುಗಳೂ ಇಲ್ಲಿ ಸಿಗಲಿದೆ. 160 ಎಕರೆ ಜಾಗ ಇದೆ. ನಿರೋದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Also Read  ವಂದೇ ಭಾರತ್ ರೈಲು ಮಾದರಿಯಲ್ಲೇ 'ವಂದೇ ಮೆಟ್ರೋ ಸೇವೆ' ➤ ರೈಲ್ವೆ ಸಚಿವ ಘೋಷಣೆ

error: Content is protected !!
Scroll to Top