ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, . 14. ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು. ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದರಂತೆ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದರು.

Also Read  ನಿಡ್ಪಳ್ಳಿ ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ

 

 

 

error: Content is protected !!
Scroll to Top