ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!*

(ನ್ಯೂಸ್ ಕಡಬ)newskadaba.com   ನವದೆಹಲಿ, ನ.22: ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ.

ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ ‘ಬಿಜೆಪಿ ಸರ್ಕಾರದ ಅವಧೀಲಿ ಕೋವಿಡ್ ಹಗರಣ ನಡೆದಿದೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು ಹಾಕಿತ್ತು.ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದಲ್ಲದೆ, ವಾಸ್ತವದಲ್ಲಿ ತಾವೇನು ಮಾತನಾಡಿದ್ದೇನೆ ಎಂಬುದರ ಬಗ್ಗೆ ವಿವರಿಸಿ ನ್ಯಾಯಮೂರ್ತಿ ಕುನ್ಹಾ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೇ, ವಿವಾದಾತ್ಮಕ ಹೇಳಿಕೆಯಿಂದ ತಮ್ಮ ಮನಸ್ಸಿಗೆ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Also Read  ಮಂಗಳಾದೇವಿ ದೇವಸ್ಥಾನ ನವರಾತ್ರಿ ಉತ್ಸವ - 11 ಸ್ಟಾಲ್ ಗಳ ಹರಾಜು

error: Content is protected !!
Scroll to Top