ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25. ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ.

ಈ ಕುರಿತಾಗಿ ಮಾತನಾಡಿದ ದಿನೇಶ್ ಗೂಳಿಗೌಡ “ ಚಿನ್ನದ ರಥ ನಿರ್ಮಿಸುವ ವೆಚ್ಚವನ್ನು ಸರ್ಕಾರ ಪಾಲು ನೀಡಬೇಕು ಮತ್ತು ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ನೀಡಿದ್. ಅದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಆದೇಶ ನೀಡಿರುವುದು ಸಂತಸ ತಂದಿದೆ” ಎಂದಿದ್ದಾರೆ.

Also Read  ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ➤ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

 

error: Content is protected !!
Scroll to Top