(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25: ಕನ್ನಡ ಶಾಲೆಗಳಲ್ಲಿ ಕನ್ನಡದ ಬೇರುಗಳು ಗಟ್ಟಿಯಾಗಿದ್ದು ಅವುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೇಂದ್ರ ಸಾಹಿತ್ಯ ಪರಿಷತ್ ಅಗತ್ಯವಾಗಿ ಮಾಡಬೇಕು ಎಂದು ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಧನಂಜಯ ಕುಂಬ್ಳೆ ಹೇಳಿದರು.
ಅವರು ಸುಳ್ಯದ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಇಲ್ಲಿಯ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಾಂಗಣದಲ್ಲಿ ನಡೆದ 27ನೇ ಸಾಹಿತ್ಯ ಸಮ್ಮೇಳನದ ಸಮರೋಪ ಸಮಾರಂಭದಲ್ಲಿ ಅವರು ಸಮರೋಪ ಭಾಷಣ ಮಾಡಿ, ಮಾತನಾಡಿದರು. ಕೇಂದ್ರ ಸಾಹಿತ್ಯ ಸಮ್ಮೇಳನಕ್ಕೆ ಸರಕಾರ 25 ಕೋಟಿ ಅನುದಾನ ನೀಡುತ್ತಿದೆ. ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡದಿರುವುದು ಖೇದಕರ ಎಂದು ಹೇಳಿದರು.