ನ. 30 ರಿಂದ ಡಿ. 15ರವರೆಗೆ “ಬೆಂಗಳೂರು ಹಬ್ಬ” 2ನೇ ಆವೃತ್ತಿ ಆಚರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25.  ಇದೇ ನವೆಂಬರ್‌ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ “ಬೆಂಗಳೂರು ಹಬ್ಬ” ಎರಡನೇ ಆವೃತ್ತಿಯನ್ನು ಅದ್ಧೂರಿಯಿಂದ ಆಚರಿಸಲು ಸಜ್ಜಾಗಿದೆ.

ನವೆಂಬರ್‌ 30ರಂದು ಅದ್ಧೂರಿಯಾಗಿ ಚಾಲನೆ ಪಡೆಯಲಿರುವ ಬೆಂಗಳೂರು ಹಬ್ಬ 16 ದಿನಗಳ ಕಾಲ ನಡೆಯಲಿದ್ದು, ನಮ್ಮ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಸಂಗೀತ, ನೃತ್ಯ, ಚಿತ್ರಕಲೆ, ವಿವಿಧ ರೀತಿಯ ಮಳಿಗೆಗಳ ಆಯೋಜನೆ ಸೇರಿದಂತೆ ಸಾರ್ವಜನಿಕರನ್ನು ಮನಸೂರೆಗೊಳಿಸುವ 500ಕ್ಕೂ ಅಧಿಕ ಕಾರ್ಯಕ್ರಮಗಳನ್ನು ನಗರದ 40ಕ್ಕೂ ಹೆಚ್ಚು ಸ್ಥಳದಲ್ಲಿ ಆಯೋಜಿಸಲಾಗಿದೆ. ಪ್ರಮುಖವಾಗಿ ನಗರದ ಫ್ರೀಡಂ ಪಾರ್ಕ್, ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC), ಮಲ್ಲೇಶ್ವರದ ಪಂಚವಟಿ, ಕಾಮರಾಜ್ ರಸ್ತೆಯ ಸಭಾ ಮತ್ತು NGMA ನಂತಹ ಜನಪ್ರಿಯ ಸ್ಥಳಗಳಲ್ಲಿ ಕಾರ್ಯಕ್ರಮಗಳು ಜರುಗಲಿವೆ.

Also Read  ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಲೇಬೇಕು-ಹೈ ಕೋರ್ಟ್

 

 

error: Content is protected !!
Scroll to Top