ಬೈಕ್- ಕಾರು ಅಪಘಾತ: ಸವಾರ ಮೃತ್ಯು..!



(ನ್ಯೂಸ್ ಕಡಬ) newskadaba.com ಮಂಗಳೂರು, . 26. ಬೈಕ್-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.







ಮೃತರನ್ನು ಹೇರಾಡಿ ಗ್ರಾಮದ ಅರುಣ (24) ಎಂದು ಗುರುತಿಸಲಾಗಿದೆ. ಮೋಟಾರು ಸೈಕಲ್‌ನಲ್ಲಿ ಬಾರ್ಕೂರಿನಿಂದ ರಂಗನಕೆರೆಗೆ ಹೋಗುತ್ತಾ ಸಮಯ ಸುಮಾರು ರಾತ್ರಿ 8:30 ಗಂಟೆಗೆ ಹನೇಹಳ್ಳಿ ಗ್ರಾಮದ ಬಾರ್ಕೂರು ಸರಕಾರಿ ಆಸ್ಪತ್ರೆ ಸಮೀಪ ತಲುಪುವಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್ ರವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಕೂಡಲೇ ಅವರನ್ನು ಚಿಕಿತ್ಸೆ ಬಗ್ಗೆ ಮಹೇಶ್ ಆಸ್ಪತ್ತೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರ ಸಲಹೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದು, ಹರೀಶ್ ರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.






 

error: Content is protected !!
Scroll to Top