12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

crime, arrest, suspected

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಪಿಎಸ್‌ಐಗಳ ಅವರ ನೇತೃತ್ವದಲ್ಲಿ ಹೆಡ್‌ಕಾನ್ಸ್‌ ಟೆಬಲ್‌ ಗಣೇಶ್‌ಪ್ರಸಾದ್, ಕಾನ್ಸ್‌ ಟೆಬಲ್‌ಗಳಾದ ಪ್ರವೀಣ್, ಶಿದ್ದಪ್ಪ, ಶಿವಾನಂದ ಮಡ್ಡಿ, ನಾಗರಾಜ್ ಅವರು ಆರೋಪಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.

Also Read  ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..!

 

 

error: Content is protected !!
Scroll to Top