(ನ್ಯೂಸ್ ಕಡಬ) newskadaba.com ಹಾಸನ, ಡಿ. 02. ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಮೃತಪಟ್ಟ ಘಟನೆ ಪ್ರಕರಣ ಸಂಬಂಧ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪ್ ಚಾಲಕ ಮಂಜೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ. ಮೈಸೂರಿನಿಂದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ ತೀವ್ರವಾಗಿ ಗಾಯಗೊಂಡಿದ್ದ 26 ವರ್ಷದ ಹರ್ಷಬರ್ದನ್ ಚಿಕಿತ್ಸೆ ಫಲಕಾರಿಯಾಗದೇ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.