(ನ್ಯೂಸ್ ಕಡಬ) newskadaba.com ಆನೇಕಲ್, ಡಿ. 02. ಅನಿಲ ಸೋರಿಕೆಯಾಗಿ ಸಿಲಿಂಡರ್ ಬ್ಲಾಸ್ಟ್ ಆಗಿರುವ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ.
ಇಂದು ಬೆಳ್ಳಂಬೆಳಿಗ್ಗೆ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಅಸ್ಸಾಂ ಮೂಲದ ಬಿದನ್ ದಾಸ್, ದಯಾಲ್ ಶಾಂತಿ ಹಾಗೂ ಗುಲಾಭ ಕರ್ಮಾಕರ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.