ಫೆಂಗಲ್ ಚಂಡಮಾರುತ: ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಡಿ. 02. ಫೆಂಗಲ್ ಚಂಡಮಾರುತದ ಪರಿಣಾಮ ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.

ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ ಎಂದು ವರದಿ ತಿಳಿಸಿದೆ.

Also Read  ಆಕಾಶ್ ಭವನ್ ಶರಣ್ ಹಾಗೂ ಪಿಂಕಿ ನವಾಝ್ ನನ್ನು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಕಮಿಷನರ್ ಆದೇಶ...!

 

error: Content is protected !!
Scroll to Top