(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು : ಈಗಾಗಲೇ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ ಪ್ರಾರಂಭವಾಗಿದ್ದು, ಭಕ್ತರು ಸಾಗರೋಪಾದಿಯಲ್ಲಿ ಜಮಾಯಿಸುತ್ತಿದ್ದಾರೆ. ಡಿಸೆಂಬರ್‌ನಿಂದ ಜನವರಿವರೆಗೆ ಕರ್ನಾಟಕದಿಂದ ಶಬರಿಮಲೆಗೆ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಬೆಳೆಸುತ್ತಾರೆ. ಈ ಬಾರಿ ಭಕ್ತರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗುಡ್ ನ್ಯೂಸ್ ನೀಡಿದ್ದು, ಇನ್ನು ಮುಂದೆ ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಸುಗಮವಾಗಲಿದೆ.
ಭಕ್ತರಿಗೆ ಅನುಕೂಲಕರವಾಗುವಂತೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ಸೇವೆಯನ್ನು ಆರಂಭಿಸಿದೆ. ರಾಜಧಾನಿ ಬೆಂಗಳೂರಿನಿಂದ ಕೇರಳದ ವರೆಗೆ ಇನ್ನು ಐರಾವತ ವೋಲ್ವೋ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 29 ನವೆಂಬರ್‌ರಿಂದ ಬೆಂಗಳೂರು ಮತ್ತು ಕೇರಳದ ಪಂಪೆ ನಡುವೆ ಬಸ್ ಸಂಚಾರ ಆರಂಭವಾಗಿದೆ ಎಂದು ತಿಳಿಸಿದೆ.