(ನ್ಯೂಸ್ ಕಡಬ) newskadaba.com ಡಿ. 02. ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಡಿಸೆಂಬರ್ 03ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.