ಸಂಸತ್ತಿನ ಚಳಿಗಾಲದ ಅಧಿವೇಶನ : ಸಿಗರೆಟ್, ತಂಪುಪಾನೀಯದ ಮೇಲಿನ ಜಿಎಸ್ಟಿ ಶೇ.35ಕ್ಕೆ ಹೆಚ್ಚಳ ಸಂಭವ

(ನ್ಯೂಸ್ ಕಡಬ) newskadaba.com ಡಿ. 03 ನವದೆಹಲಿ: ಅದಾನಿ ಹಗರಣ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿಗೆ ಒಳಗಾಗಿದ್ದ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪಗಳು ಮಂಗಳವಾರದಿಂದ ಸುಗಮವಾಗಿ ಆರಂಭವಾಗುವ ನಿರೀಕ್ಷೆ ಇದೆ. ಸಭಾಧ್ಯಕ್ಷರೊಂದಿಗಿನ ಸರ್ವಪಕ್ಷ ಸಭೆಯ ಬಳಿಕ ಈ ಮಹತ್ವದ ಬೆಳವಣಿಗೆ ನಡೆದಿದೆ.

‘ಡಿ.13 ಮತ್ತು 14ರಂದು ಲೋಕಸಭೆಯಲ್ಲಿ ಮತ್ತು 16 ಮತ್ತು 17ರಂದು ರಾಜ್ಯಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಗೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳು ಒಪ್ಪಿಕೊಂಡಿವೆ. ಸಂವಿಧಾನ ಸ್ವೀಕರಿಸಿ 75 ವರ್ಷ ಆದ ನಿಮಿತ್ತ ಈ ಚರ್ಚೆಗೆ ಸಮ್ಮತಿ ಸೂಚಿಸಲಾಗಿದೆ. ಇದೇ ವೇಳೆ, ಮಂಗಳವಾರದಿಂದ ಸಾಮಾನ್ಯ ಕಲಾಪಗಳು ಕೂಡ ಸುಗಮವಾಗಿ ಆರಂಭವಾಗುವ ನಿರೀಕ್ಷೆ ಇದೆ’ ಎಂದು ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

Also Read  ಕೊಡಗು ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಯ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

error: Content is protected !!
Scroll to Top