(ನ್ಯೂಸ್ ಕಡಬ) newskadaba.com ಡಿ. 03 ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ ಪೈಕಿ 23 ರಾಜ್ಯಗಳು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.