ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 03 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರಿರುವ ಮಾಹಿತಿಯ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿ.01ರಂದು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದು ಬೆಳಿಗ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.  ದಾಚಿಗಂ ಅರಣ್ಯ ಪ್ರದೇಶಕ್ಕೂ ಮುನ್ನ ಶ್ರೀನಗರದ ಹರ್ವಾನ್ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ನಂತರ ಉಗ್ರರ ಅಡಗುತಾಣ ಸುತ್ತುವರಿದಾಗ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read  ಶೀಘ್ರದಲ್ಲೇ ಬರಲಿದೆ 100 ರೂ. ನಾಣ್ಯ

error: Content is protected !!
Scroll to Top