ದ. ಕ ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಿಸಿ ಮುಲ್ಲೈ ಮುಹಿಲನ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಡಿಸಿ) ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಕ್ಷಿಪ್ರವಾಗಿ ಕ್ರಮಕೈಗೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಪರಿಹಾರ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತಿರುವುದರಿಂದ ಪ್ರವಾಸಿಗರು ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ಇಳಿಯದಂತೆ ಸೂಚಿಸಲಾಗಿದೆ.

Also Read  ಕರಾವಳಿಯಲ್ಲಿ ಮರಳುಗಾರಿಕೆಗೆ ವಿಶೇಷ ರಿಯಾಯಿತಿ ➤ ಗ್ರಾ.ಪಂ. ವ್ಯಾಪ್ತಿಯ ಮರಳುಗಾರಿಕೆಗೆ ಆಯಾ ಗ್ರಾ.ಪಂ. ಗಳಿಗೆ ಅಧಿಕಾರ

 

error: Content is protected !!
Scroll to Top