(ನ್ಯೂಸ್ ಕಡಬ) newskadaba.com ಬೆಂಗಳೂರು, . 04. ಸಚಿನ್ ತೆಂಡೂಲ್ಕರ್ ಫೌಂಡೇಷನ್ (ಎಸ್ಟಿಎಫ್) ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಸಂತೋಷವನ್ನು ಹಂಚಿಕೊಂಡ ಸಚಿನ್ ತೆಂಡೂಲ್ಕರ್ , ಸಾರಾ ಅವರು ಯೂನಿವರ್ಸಿಟಿ ಕಾಲೇಜು ಲಂಡನ್ನಿಂದ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕ್ರೀಡೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಮೂಲಕ ಭಾರತವನ್ನು ಸಶಕ್ತಗೊಳಿಸಲು ಆಕೆ ಪ್ರಯಾಣವನ್ನು ಪ್ರಾರಂಭಿಸಿದಾಗ ಜಾಗತಿಕ ಕಲಿಕೆಯು ಹೇಗೆ ಪರಿಪೂರ್ಣತೆಗೆ ತಲುಪಿದೆ ಎಂಬುದನ್ನು ನೆನಪಿಸುತ್ತದೆ ಎಂದು ಅವರು ಹೇಳಿದ್ದಾರೆ.