ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ನೌಷದ್ ಮನೆ ಮೇಲೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು:  ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ.

ಬೆಂಗಳೂರಿನಿಂದ ಆಗಮಿಸಿದ 5 ಜನರ ಎನ್‌ಐಎ ತಂಡ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ ನ ಮನೆಗೆ ಇಂದು ಮುಂಜಾನೆ 5.30 ರ ಸುಮಾರಿಗೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ನೌಷದ್ ಪತ್ತೆಗಾಗಿ ಎನ್‌ಐಎ 2 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಎನ್‌ಐಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ. ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

Also Read  ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

error: Content is protected !!
Scroll to Top