ಸರ್ಜಾಪುರ- ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ- ರಾಜ್ಯ ಸಚಿವ ಸಂಪುಟದ ಅನುಮೋದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಕೋರಮಂಗಲ ಮತ್ತು ಮೇಖ್ರಿ ವೃತ್ತ ಮಾರ್ಗವಾಗಿ ಸರ್ಜಾಪುರದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ (ಹಂತ 3ಎ) ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದ್ದು, ಬೆಂಗಳೂರಿನ ನಗರ ಸಾರಿಗೆ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಪ್ರಸ್ತಾವಿತ ಮಾರ್ಗವು ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಪ್ರಮುಖ ವ್ಯವಹಾರಿಕ ಜಿಲ್ಲೆಯ ಮೂಲಕ ಸಂಪರ್ಕಿಸುತ್ತದೆ. ಈ ಬೆಳವಣಿಗೆಯು ನಗರದಾದ್ಯಂತ ಮೆಟ್ರೋ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಪ್ರಯಾಣಿಕರಿಂದ ಸ್ವಾಗತಿಸಲ್ಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7, 2023 ರಂದು ತಮ್ಮ ಬಜೆಟ್ ಭಾಷಣದಲ್ಲಿ ಸುಮಾರು ರೂ. 16,000 ಕೋಟಿ ಅಂದಾಜು ವೆಚ್ಚದ ಸರ್ಜಾಪುರ-ಹೆಬ್ಬಾಳ ಮೆಟ್ರೋ ಮಾರ್ಗವನ್ನು ಘೋಷಿಸಿದ್ದರು. ಆದರೆ, ಎರಡು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಪರಿಷ್ಕೃತ ವಿವರವಾದ ಯೋಜನಾ ವರದಿಯಲ್ಲಿ (ಡಿಪಿಆರ್) ತಗಲುವ ವೆಚ್ಚ ರೂ. 28,405 ಕೋಟಿ ಆಗಿದೆ.

Also Read  ರಾಜ್ಯದಲ್ಲಿ ಭಾರೀ ಮಳೆ...! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

 

error: Content is protected !!
Scroll to Top