ಕರ್ನಾಟಕದಲ್ಲಿ 3 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ಕೇಂದ್ರ ಸರ್ಕಾರವು ದೇಶದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ದೇಶದಲ್ಲಿ 85 ಕೇಂದ್ರೀಯ ವಿದ್ಯಾಲಯಗಳು ಮತ್ತು 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಘೋಷಿಸಿದೆ. ಇದರಲ್ಲಿ ಕರ್ನಾಟಕದಲ್ಲಿ ಮೂರು ಕೇಂದ್ರೀಯ ವಿದ್ಯಾಲಯಗಳು ಬರಲಿವೆ.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮೂರು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಗರಿಷ್ಠ 13 ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲಾಗುವುದು. 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಘೋಷಿಸಲಾಗಿದ್ದು, ಗರಿಷ್ಠ ಎಂಟು ನವೋದಯ ವಿದ್ಯಾಲಯಗಳನ್ನು ಅರುಣಾಚಲ ಪ್ರದೇಶದಲ್ಲಿ ತೆರೆಯಲಾಗುವುದು. ಮುಂದಿನ ಎಂಟು ವರ್ಷಗಳಲ್ಲಿ ಈ ಶಾಲೆಗಳನ್ನು ತೆರೆಯಲು 8,000 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಲಾಗುವುದು. ಇವೆಲ್ಲವೂ ಪ್ರಧಾನಮಂತ್ರಿ-ಶ್ರೀ ಶಾಲೆಗಳಾಗಿ ಕಾರ್ಯನಿರ್ವಹಿಸುತ್ತವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Also Read  ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..!

 

error: Content is protected !!
Scroll to Top